ಮುಡಾ ಪ್ರಕರಣವನ್ನು ಕಾನೂನಾತ್ಮಕವಾಗಿ ಹಾಗೂ ರಾಜಕೀಯವಾಗಿ ಯಶಸ್ವಿಯಾಗಿ ಎದುರಿಸ್ತೀವಿ: ಮುಖ್ಯಮಂತ್ರಿ ಸಿದ್ದರಾಮಯ್ಯ
- shivaraj B
- 5 Aug 2024 , 2:14 PM
- Belagavi
- 121
ಬೆಳಗಾವಿ : ಮುಡಾ ಪ್ರಕರಣವನ್ನು ಕಾನೂನಾತ್ಮಕವಾಗಿ ಹಾಗೂ ರಾಜಕೀಯವಾಗಿ ಸರಿಯಸಗಿ ಎದುರಿಸ್ತೀವಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಡಕ್ ಆಗಿ ತಿಳಿಸಿದರು.
ಅವರು ಸೋಮವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮುಡಾ ಪ್ರಕರಣದ ಕುರಿತು ರಾಜ್ಯಪಾಲರು ನೀಡಿರುವ ಶೋಕಾಸ್ ನೊಟೀಸ್ ಹಿಂತೆಗೆದುಕೊಳ್ಳಬೇಕು. ಅದೇ ರೀತಿ ರಾಜ್ಯಪಾಲರಿಗೆ ಟಿ.ಜೆ.ಅಬ್ರಹಾಂ ನೀಡಿರುವ ದೂರನ್ನು ತಿರಸ್ಕರಿಸಬೇಕು ಎಂದು ಮನವಿ ಮಾಡಿದ್ದೇವೆ.
ಈ ಕುರಿತಾಗಿ ರಾಜ್ಯಪಾಲರು ಯಾವ ತೀರ್ಮಾನ ಕೈಗೊಳ್ಳುತ್ತಾರೆ ಎಂಬುದನ್ನು ಕಾದು ನೋಡುವುದಾಗಿ ಅವರು ಹೇಳಿದರು.